ಮಕ್ಕಳಾಗದ ಚಿಂತೆ: ದಂಪತಿ ಆತ್ಮಹತ್ಯೆ
ಹೆಬ್ರಿ, ಅ.9: ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗದ ಚಿಂತೆಯಲ್ಲಿ ಮನನೊಂದ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರಂಗ ಗ್ರಾಮದ ತಲೆಮನೆ ಎಂಬಲ್ಲಿ ನಡೆದಿದೆ.
ಮೃತರನ್ನು ಶಿವರಾಮ ಶೆಟ್ಟಿ(55) ಮತ್ತು ಅವರ ಪತ್ನಿ ಸಂಪಾ ಶೆಟ್ಟಿ ಎಂದು ಗುರುತಿಸಲಾಗಿದೆ. ಮಕ್ಕಳಾಗದ ಚಿಂತೆಯಲ್ಲಿ ಸಂಪಾ ಶೆಟ್ಟಿ ಅ.4ರಂದು ಸಂಜೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಚಾರದಲ್ಲಿ ಮನನೊಂದ ಶಿವರಾಮ ಶೆಟ್ಟಿ ಅದೇ ದಿನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರು ಅ.8ರಂದು ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story