ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು
ಅಜೆಕಾರು, ಅ.24: ಕೆರ್ವಾಶೆ ಗ್ರಾಮದ ಶೆಟ್ಟಿಬೆಟ್ಟು ಎಂಬಲ್ಲಿ ಸಂಜೆ ಆರು ಗಂಟೆ ಸುಮಾರಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಶೆಟ್ಟಿಬೆಟ್ಟುವಿನ ಸೂರು(70) ಎಂದು ಗುರುತಿಸಲಾಗಿದೆ. ಇವರು ಮೇಯಲು ಬಿಟ್ಟ ದನಗಳನ್ನು ಮನೆಗೆ ಅಟ್ಟಿಕೊಂಡು ಬರುತ್ತಿರುವಾಗ ಕೂಡಬೆಟ್ಟು ಕಡೆಗೆ ಹೋಗುತ್ತಿದ್ದ ಬೈಕ್ ಢಿಕ್ಕಿ ಹೊಡೆಯಿತು. ಗಂಭೀರವಾಗಿ ಗಾಯಗೊಂಡ ಸೂರು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story