ಉಡುಪಿ: ಕನಕ ಜಯಂತಿ ಕುರಿತು ಪೂರ್ವಭಾವಿ ಸಭೆ
ಉಡುಪಿ, ಅ.27: ನ.17ರಂದು ನಡೆಯುವ ಕನಕ ಜಯಂತಿ ಆಚರಣೆ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆಯಿತು.
ರಾಜ್ಯಾದ್ಯಂತ ನ.17ರಂದು ಕನಕ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಜಿಲ್ಲಾ ಮಟ್ಟದಲ್ಲಿ ಉಡುಪಿಯ ಗೋವಿಂದ ಕಲ್ಯಾಣ ಮಂಟಪದಲ್ಲಿ ಇದನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆಸುವಂತೆ ಸೂಚಿಸಿದ ಸಚಿವರು ತಜ್ಞರಿಂದ ವಿಶೇಷ ಉಪನ್ಯಾಸ ಎರ್ಪಡಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಸಿಇಒ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್, ಜಿಲ್ಲಾ ಕುರುಬರ ಸಮಾಜ ಸೇವಾ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಅನುರಾಧಾ ಸ್ವಾಗತಿಸಿ, ವಂದಿಸಿದರು.
Next Story