ವಿದ್ಯಾಸಿರಿ: ನ.30ರೊಳಗೆ ಅರ್ಜಿ ಸಲ್ಲಿಸಲು ಸೂಚನೆ
ಮಂಗಳೂರು, ನ.3: 2016-17ನೆ ಸಾಲಿನ ಮೆಟ್ರಿಕ್ ನಂತರದ ಅಲ್ಪ ಸಂಖ್ಯಾತ ಸಮುದಾಯದ ವಿದ್ಯಾರ್ಥಿ ಗಳಿಗೆ ವಿದ್ಯಾಸಿರಿ ಯೋಜನೆಗೆ ಸಂಬಂಧಿಸಿದ ಅರ್ಜಿ ನಮೂನೆಯನ್ನು ಅಲ್ಪ ಸಂಖ್ಯಾತರ ನಿರ್ದೇಶನಾಲಯದ ವೆಬ್ಸೈಟ್ www.gokdom.kar.nic.inನಿಂದ ಡೌನ್ಲೋಡ್ ಮಾಡಿಕೊಳ್ಳಬೇಕು. ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ನಮೂನೆಯಲ್ಲಿ ನೀಡಿರುವ ಸೂಚನೆಯಂತೆ ಎಲ್ಲಾ ದಾಖಲೆಗಳೊಂದಿಗೆ ನ.30ರೊಳಗೆ ಸಲ್ಲಿಸುವಂತೆ ಪ್ರಕಟನೆ ತಿಳಿಸಿದೆ.
Next Story