20ಕ್ಕೆ ಉಡುಪಿ ಜಿಲ್ಲಾಮಟ್ಟದ ಯುವಜನೋತ್ಸವ
ಉಡುಪಿ, ನ.16: ಉಡುಪಿ ಜಿಲ್ಲಾಮಟ್ಟದ 2016-17ನೆ ಸಾಲಿನ ಯುವಜನೋತ್ಸವ ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವುಗಳ ಸಂಯು ಕ್ತಾಶ್ರಯದಲ್ಲಿ ನ.20ರಂದು ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಬೆಳಗ್ಗೆ 10ಕ್ಕೆ ನಡೆಯುವ ಜಿಲ್ಲಾ ಯುವಜನೋತ್ಸವ ಸಮಾರಂಭವನ್ನು ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿದ್ದಾರೆ. ಆಸಕ್ತ ಸ್ಪರ್ಧಿಗಳು ಸ್ಪರ್ಧೆ ನಡೆಯುವ ಸ್ಥಳದಲ್ಲಿ ಬೆಳಗ್ಗೆ 9ರೊಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವಂತೆ ಸಂಘಟಕರು ತಿಳಿಸಿದ್ದಾರೆ.
ಖಾಸಗಿ ಬಸ್ ಪ್ರಯಾಣ ದರ ಪರಿಷ್ಕರಣೆ ಮಂಗಳೂರು, ನ.16: ಬಸ್ ಮಾಲಕರ ಸಂಘದ ಮನವಿ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ದ.ಕ. ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ನ.15ರಿಂದ ಅನ್ವಯವಾಗುವಂತೆ ಬಸ್ ಪ್ರಯಾಣ ದರವನ್ನು ಪರಿಷ್ಕರಿಸಿ ಜಾರಿಗೊಳಿಸಿದೆ.
Next Story