ಮೂಡ್ಲಕಟ್ಟೆ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಕುಂದಾಪುರ, ನ.20: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ಡಾ.ಮೋಹನದಾಸ್ ಭಟ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್ಕ್ರಾಸ್ ಕುಂದಾಪುರ ವಲಯ ಅಧ್ಯಕ್ಷ ಎಸ್.ಜಯಕರ್ ಶೆಟ್ಟಿ, ಡಾಎಚ್.ಎಸ್.ಮಲ್ಲಿ ರಕ್ತದಾನದ ಕುರಿತು ಮಾಹಿತಿ ನೀಡಿದರು. ರೆಡ್ಕ್ರಾಸ್ನ ಕೋಶಾಧಿಕಾರಿ ಶಿವರಾಮ್ ಶೆಟ್ಟಿ, ಮುತ್ತಯ್ಯ ಶೆಟ್ಟಿ, ಗಣೇಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಪ್ರಾದ್ಯಾಪಕ ಮರಳೀಧರ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಎಂ. ವಂದಿಸಿದರು. ಕಂಪ್ಯೂಟರ್ ಸಾಯನ್ಸ್ ವಿಭಾಗದ ಪ್ರಾದ್ಯಾಪಕಿ ಪ್ರೀತಿ ಕಾರ್ಯಕ್ರಮ ನಿರೂಪಿಸಿದರು.
Next Story