ವಾಲಿಬಾಲ್: ಕೋಡಿ ಬ್ಯಾರೀಸ್ ಕಾಲೇಜಿನ ಹಯಾಝ್ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕುಂದಾಪುರ, ಡಿ.3: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಉಜಿರೆಯ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಕೋಡಿಯ ಬ್ಯಾರೀಸ್ ಪಿಯು ಕಾಲೇಜು ತಂಡ ದ್ವಿತೀಯ ಸ್ಥಾನ ಗಳಿಸಿದ್ದು, ತಂಡದ ಸದಸ್ಯ ಮುಹಮ್ಮದ್ ಹಯಾಝ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಷ್ಟ್ರಮಟ್ಟದ ಪಂದ್ಯವು ಹಿಮಾಚಲ ಪ್ರದೇಶದಲ್ಲಿ ನಡೆಯಲಿದೆ. ಇವರನ್ನು ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಪ್ರೀತೇಶ್ ಶೆಟ್ಟಿ ಗುಲ್ವಾಡಿ, ಇಲಿಯಾಸ್ ಹಾಗೂ ಜಫ್ ಸನ್ನಿ ಡಿಸೋಜ ತರಬೇತುಗೊಳಿಸಿದ್ದಾರೆ.
Next Story