ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ, ಡಿ.5: ಉಜಿರೆ ಗ್ರಾಮದ ರೆಂಜಾಳದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಚಂದ್ರಶೇಖರ(43)ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಾಯಿಲೆಯಿಂದ ಬಳಲುತ್ತಿದ್ದ ಇವರು ಮನನೊಂದು ರವಿವಾರ ಸಂಜೆ ಮನೆಯೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದು ತಕ್ಷಣ ಇವರನ್ನು ಪತ್ನಿ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು ಎನ್ನಲಾಗಿದೆ.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಒಂದು ಮಗುವನ್ನು ಅಗಲಿದ್ದಾರೆ ಎಂದು ತಿಳಿದು ಬಂದಿದೆ.
Next Story