ಅಕ್ರಮ ಮದ್ಯ ಸಾಗಾಟ : ಆರೋಪಿ ಬಂಧನ
ಬೆಳ್ತಂಗಡಿ, ಡಿ.15 : ಬೆಳ್ತಂಗಡಿ ಪೋಲೀಸರ ಕಾರ್ಯಚರಣೆಯೊಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮದ್ಯವನ್ನು ಆರೋಪಿ ಸಹಿತ ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಆರೋಪಿ ಧೂಮಣ್ಣ ಶೆಟ್ಟಿ (45) ಎಂದು ಗುರುತಿಸಲಾಗಿದೆ.
ಪಿಎಸ್ಐ ರವಿ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ 52 ಬಾಟ್ಲಿಗಳು ಹಾಗೂ 9 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
Next Story