Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳು ನಾಟಕ ಸ್ಪರ್ಧೆಗೆ ಆಹ್ವಾನ

ತುಳು ನಾಟಕ ಸ್ಪರ್ಧೆಗೆ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ10 Jan 2017 6:42 PM IST
share
ತುಳು ನಾಟಕ ಸ್ಪರ್ಧೆಗೆ ಆಹ್ವಾನ

ಬಂಟ್ವಾಳ , ಜ.10 : ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ಆಶ್ರಯದಲ್ಲಿ ಮಡಂತ್ಯಾರ್ ಜೇಸಿಐನ ಸಹಕಾರದೊಂದಿಗೆ ದಿ. ಶಿಸಿರ್ ಪುಂಜಾಲಕಟ್ಟೆ ಅವರ ಸ್ಮರಣಾರ್ಥವಾಗಿ ದ.ಕ., ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯನ್ನೊಳಗೊಂಡ ತುಳು ನಾಟಕ ಸ್ಪರ್ಧೆ ಫೆಬ್ರವರಿ 26ರಿಂದ ಮಾರ್ಚ್ 4ರ ವರೆಗೆ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಕ್ಲಬ್‌ನ ಸ್ಥಾಪಕಾಧ್ಯಕ್ಷ ತುಂಗಪ್ಪ ಬಂಗೇರ ತಿಳಿಸಿದ್ದಾರೆ.

ಮಂಗಳವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸಕ್ತ ನಾಟಕ ತಂಡಗಳು ಜನವರಿ 26ರ ಒಳಗಾಗಿ ತಮ್ಮ ಕೃತಿಯನ್ನು ಕ್ಲಬ್‌ಗೆ ತಲುಪಿಸುವಂತೆ ಅವರು ಕೋರಿದ್ದಾರೆ.

ಯಾವುದೇ ಅಶ್ಲೀಲತೆ, ಧರ್ಮ ನಿಂದನೆಗಳಿಗೆ ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು ,  ತುಳು ಸಾಮಾಜಿಕ ನಾಟಕಕ್ಕೆ ಮಾತ್ರ ಆದ್ಯತೆಯನ್ನು ನೀಡಲಾಗುವುದು. ನಾಟಕದ ಅವಧಿಯು ಕನಿಷ್ಠ 2:30 ತಾಸುಗಳಿಗೆ ಮಾತ್ರ ಸೀಮಿತವಾಗಿರಬೇಕು. ಅವಧಿ ಮೀರಿದ ನಾಟಕಗಳು ಬಹುಮಾನಕ್ಕೆ ಪರಿಗಣಿಸುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಾಟಕ ತಂಡಗಳಿಗೆ ಹತ್ತು ಸಾವಿರ ಭತ್ಯೆಯನ್ನು ನೀಡಲಾಗುವುದು ಎಂದರು.

ಈಗಾಗಲೇ ಬಹುಮಾನ ಪಡೆದ ನಾಟಕದ ಕೃತಿಗೆ ಈ ಸ್ಪರ್ಧೆಯಲ್ಲಿ ಅವಕಾಶವಿರುವುದಿಲ್ಲ ಎಂದು ಸ್ಪಷ್ಟ ಪಡಿಸಿದರ ತುಂಗಪ್ಪ ಬಂಗೇರ,  ಆಯ್ಕೆಯಾದ ನಾಟಕ ತಂಡ 5 ಸಾವಿರ ರೂಪಾಯಿ ಠೇವಣಿಯನ್ನು ಇಡಬೇಕು. ಹೆಚ್ಚಿನ ಮಾಹಿತಿಗಾಗಿ 9901098038, 9449616372 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದರು.

ಮಾರ್ಚ್ 5ರಂದು ಸಾಮೂಹಿಕ ವಿವಾಹ:

ಕ್ಲಬ್‌ನ ವತಿಯಿಂದ 9ನೆ ವರ್ಷದ ಉಚಿತ ಸಾಮೂಹಿಕ ವಿವಾಹವು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾರ್ಚ್ 5ರಂದು ನಡೆಯಲಿದೆ. ಅಂದೇ ಸಂಜೆ ನಾಟಕ ಸ್ಪರ್ಧೆಯ ಸಮಾರೋಪ ಸಮಾರಂಭವು ಜರಗುವುದು ಎಂದು ತುಂಗಪ್ಪ ಬಂಗೇರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಸಾಧಕರನ್ನು ಗುರುತಿಸಿ ಸ್ವಸ್ತಿ ಸಿರಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಸಕ್ತ ಸಾಲಿನಲ್ಲಿ 10 ಜೋಡಿಗೆ ವಿವಾಹ ನಡೆಯಲಿದೆ. ಪರಿಶಿಷ್ಟ ಜಾತಿಯ ವಧು ವರನಿಗೆ ಸರಕಾರದಿಂದ 50 ಸಾವಿರ ಸಹಾಯ ಧನವನ್ನು ನೀಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಪ್ರ.ಕಾರ್ಯದರ್ಶಿ ಜಯಾರಾಜ್ ಅತ್ತಾಜೆ, ಮಡಂತ್ಯಾರು ಜೇಸಿಐ ರಾಜೇಶ್ ಪುಳಿಮಜಲು, ನಾಟಕ ಸ್ಪರ್ಧಾ ಸಂಚಾಲಕ ಕಲಾವಿದ ಎಚ್.ಕೆ.ನಯನಾಡು, ಸದಸ್ಯ ಪ್ರಭಾಕರ ಪಿ.ಎಂ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X