ಕಾರು-ಬೈಕ್ ಢಿಕ್ಕಿ: ಸವಾರ ಮೃತ್ಯು
ಕೊಲ್ಲೂರು, ಜ.27: ಕಾರೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಇಡೂರು ಕೆನರಾ ಬ್ಯಾಂಕ್ ಬಳಿಗುರುವಾರ ರಾತ್ರಿ 10:30ರ ಸುಮಾರಿಗೆ ನಡೆದಿದೆ.
ಮೃತರನ್ನು ಬೈಕ್ ಸವಾರ ಸುೀರ್ ಬೋವಿ ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ಮುದೂರಿನ ಸಂದೇಶ್ ಎಂಬವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರಿಬ್ಬರು ಬೈಕ್ನಲ್ಲಿ ಹೋಗುತ್ತಿದ್ದಾಗ ಕೊಲ್ಲೂರು ಕಡೆಯಿಂದ ವಂಡ್ಸೆ ಕಡೆಗೆ ಬರುತ್ತಿದ್ದ ಮಾರುತಿ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರಲ್ಲಿ ಸುೀರ್ ಬೋವಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತರುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story