ದ.ಕ.ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಫೆ.19ರವರೆಗೆ ನಿಷೇಧಾಜ್ಞೆ
ಮಂಗಳೂರು, ಫೆ.16: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ (ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕುಗಳು) ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಯಾವುದೇ ಸಭಾ ಕಾರ್ಯಕ್ರಮ, ರ್ಯಾಲಿ, ಪರೇಡ್, ಮಾರ್ಚ್ ಫಾಸ್ಟ್ನ್ನು ಫೆ. 17 ರಂದು ಬೆಳಗ್ಗೆ 5 ಗಂಟೆಯಿಂದ ಫೆ. 19 ರಂದು ರಾತ್ರಿ 12 ಗಂಟೆವರೆಗೆ ನಿರ್ಬಂಧಿಸಿ ದಂಡ ಪ್ರಕ್ರಿಯೆ ಸಂಹಿತೆ 1973 ರ ಕಲಂ 144 ರನ್ವಯ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ.
Next Story