ಮಂಗಳೂರು: ಮೆಲ್ಕಾರ್ ಮಹಿಳಾ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
ಮಂಗಳೂರು, ಫೆ.25: ಮೆಲ್ಕಾರ್ ಮಹಿಳಾ ಪದವಿ ಪೂರ್ವ ಕಾಲೇಜು, ಮಾರ್ನಬೈಲು ಇದರ 7ನೆ ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕಾಲೇಜಿನ ವ್ಯವಸ್ಥಾಪಕ ಎಸ್.ಎಂ.ರಶೀದ್ ಹಾಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಮುಂದಿನ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸುವುದರೊಂದಿಗೆ ಆದರ್ಶ ವ್ಯಕ್ತಿಗಳಾಗಿ, ಸಂಸ್ಥೆ, ಕಲಿಸಿದ ಅಧ್ಯಾಪಕರು ಹಾಗೂ ಪೋಷಕರಿಗೆ ಉತ್ತಮ ಹೆಸರು ತರುವಂತಾಗಬೇಕು ಹಾಗೂ ಎಲ್ಲಾ ವಿದ್ಯಾರ್ಥಿನಿಯರು ಉನ್ನತ ವಿದ್ಯಾಭ್ಯಾಸಗಳಿಸಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಆಶಿಸಿದರು.
ಸಂಸ್ಥೆಯ ಪ್ರಾಂಶುಪಾಲ ಅಬ್ದುಲ್ಲತೀಫ್, ಪರೀಕ್ಷಾ ಪೂರ್ವ ತಯಾರಿ ಬಗ್ಗೆ ಮಾಹಿತಿ ನೀಡಿದರು. ಉಪಪ್ರಾಂಶುಪಾಲೆ ಆಂಜಲೀನ ಸುನೀತಾ ಪಿರೇರಾ, ಉಪನ್ಯಾಸಕ ಅಬ್ದುಲ್ ಮಜೀದ್ ಮೊದಲಾದವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು.
ಈ ಸಂದರ್ಭ ಬೀಳ್ಕೊಡುವ ಹಾಗೂ ಬೀಳ್ಕೊಡಲ್ಪಡುವ ವಿದ್ಯಾರ್ಥಿನಿಯರು ಅಭಿಪ್ರಾಯ ವ್ಯಕ್ತಪಡಿಸಿದರು. ವಿದ್ಯಾರ್ಥಿನಿಯರಾದ ಆಯಿಷಾ ರಿನಿಷ ಸ್ವಾಗತಿಸಿದರು. ಆಯಿಷಾ ರಿಝ ವಂದಿಸಿದರು. ಫಾತಿಮತ್ ಸುಹದ ಕಾರ್ಯಕ್ರಮ ನಿರೂಪಿಸಿದರು.