ಇಂದು ಸ್ವಚ್ಛ ಮಂದಿರ ಅಭಿಯಾನ
ಮಂಗಳೂರು, ಮಾ.25: ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮಾ.26ರಂದು ಬೆಳಗ್ಗೆ 8ರಿಂದ ಸ್ವಚ್ಛ ಮಂದಿರ ಅಭಿಯಾನ ನಡೆಯಲಿದೆ. ಜಿಲ್ಲಾಕಾರಿ ಡಾ.ಕೆ.ಜಿ.ಜಗದೀಶ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿರುವ ದೇವಾಲಯಗಳಲ್ಲಿ ಜಿಲ್ಲಾಡಳಿತವು ಈ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story