ನಾಳೆಯಿಂದ ಎಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭ
ಮಂಗಳೂರು, ಮಾ.29: ನಾಳೆಯಿಂದ ಎಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಎಪ್ರಿಲ್ 13ರವರೆಗೆ ಪರೀಕ್ಷೆ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ 500 ಪ್ರೌಢಶಾಲೆಗಳ ಒಟ್ಟು 33,518 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದು, ಇವರಲ್ಲಿ 17,267 ಗಂಡುಮಕ್ಕಳು ಹಾಗೂ16,251 ಹೆಣ್ಣುಮಕ್ಕಳು ಪರೀಕ್ಷೆ ಬರೆಯಲಿದ್ದಾರೆ.
ಒಟ್ಟು ವಿದ್ಯಾರ್ಥಿಗಳಲ್ಲಿ 32,222 ಶಾಲಾ ವಿದ್ಯಾರ್ಥಿಗಳು ಹಾಗೂ 1,296 ಮಂದಿ ಖಾಸಗಿ ಅಭ್ಯಥಿ೯ಗಳು.
ಪರೀಕ್ಷೆ ಬೆಳಗ್ಗೆ 9.30ಕ್ಕೆ ಪ್ರಾರಂಭವಾಗಲಿದೆ. ಜಿಲ್ಲೆಯಲ್ಲಿ 91 ಪರೀಕ್ಷಾ ಕೇಂದ್ರಗಳು ಇದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
Next Story