ಉಡುಪಿ: ರಾಜ್ಯಮಟ್ಟದ ಸ್ವಿಮ್ಮಿಂಗ್ ಚಾಂಪಿಯನ್ಶಿಪ್ಗೆ ಚಾಲನೆ
ಉಡುಪಿ: ಕರ್ನಾಟಕ ಸ್ವಿಮ್ಮಿಂಗ್ ಅಸೋಸಿಯೇಶನ್ ಹಾಗೂ ಉಡುಪಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಜಂಟಿ ಆಶ್ರಯ ದಲ್ಲಿ ಉಡುಪಿ ಅಜ್ಜರಕಾಡು ಈಜುಕೊಳದಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ 16ನೆ ರಾಜ್ಯ ಶಾರ್ಟ್ ಕೋರ್ಸ್ ಸ್ವಿಮ್ಮಿಂಗ್ ಚಾಂಪಿಯನ್ಶಿಪ್ಗೆ ಉಡುಪಿ ಎಸ್ಪಿ ಅಣ್ಣಾಮಲೈ ಸೋಮವಾರ ಚಾಲನೆ ನೀಡಿದರು.
ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ.ಆರ್.ವಿಶಾಲ್ ವಹಿಸಿದ್ದರು. ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾದ ಉಪಾಧ್ಯಕ್ಷ ವಿಜಯ್ ರಾಘವನ್, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಶಿಂದಿಯಾ, ಸದಸ್ಯ ಜಯತೀಥ ರಾವ್, ಡೈವಿಂಗ್ ಕೋಚ್ ಬಾಲರಾಜ್, ರಕ್ಷತ್ ಜಗದಾಳೆ ಉಪಸ್ಥಿತರಿದ್ದರು.
ಅಸೋಸಿಯೇಶನ್ ಅಧ್ಯಕ್ಷ ನೀಲಕಾಂತ್ ರಾವ್ ಜಗದಾಳೆ ಸ್ವಾಗತಿಸಿದರು. ಜಂಟಿ ಕಾರ್ಯದರ್ಶಿ ಎಂ.ಸತೀಶ್ ಕುಮಾರ್ ವಂದಿಸಿದರು. ಉಡುಪಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರಾಜ್ಯಾದ್ಯಂತ ಸುಮಾರು 400 ಸ್ಪರ್ಧಾಳುಗಳು ಇದರಲ್ಲಿ ಭಾಗವಹಿಸಿದ್ದಾರೆ.
Next Story