ನಿರ್ದಿಷ್ಟ ಸಮುದಾಯದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಿದ್ದ ಯಡಿಯೂರಪ್ಪ ಕ್ಷಮೆ ಕೇಳಲಿ: ಸಚಿವ ಖಾದರ್
ಕಾರ್ತಿಕ್ ರಾಜ್ ಕೊಲೆ ಪ್ರಕರಣ
ಮಂಗಳೂರು, ಎ.30: ಪಜೀರು ಸುದರ್ಶನ ನಗರದ ನಿವಾಸಿ ಕಾರ್ತಿಕ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿರುವುದನ್ನು ಸಚಿವ ಯು.ಟಿ.ಖಾದರ್ ಪೋಲಿಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ನಗರದ ಸರ್ಕ್ಯುಟ್ ಹೌಸ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿಸ ಸಚಿವ ಯು.ಟಿ.ಖಾದರ್, ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಂಗಳೂರಿಗೆ ಆಗಮಿಸಿದ್ದಾಗ ಈ ಕಾರ್ತಿಕ್ ರಾಜ್ ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ ಒಂದು ನಿರ್ದಿಷ್ಟ ಸಮುದಾಯದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದರು. ಅವರು ಈ ಬಗ್ಗೆ ಕ್ಷಮೆ ಯಾಚಿಸಬೇಕು ಎಂದು ಹೇಳಿದರು.
ಕಾರ್ತಿಕ್ ರಾಜ್ ಕೊಲೆ ಪ್ರಕರಣಕ್ಕೆ ಅಲ್ಲಿನ ಸ್ಥಳೀಯ ಇನ್ ಸ್ಪೆಕ್ಟರ್ ಸರಿಯಾದ ರೀತಿಯಲ್ಲಿ ತನಿಖೆ ನಡೆಸಿಲ್ಲ ಎನ್ನುವುದು ಕಂಡುಬರುತ್ತದೆ. ಈ ಬಗ್ಗೆ ಕಮೀಷನರ್ ತನಿಖೆ ಮಾಡಬೇಕು ಎಂದು ಹೇಳಿದರು.
Next Story