ಮನೆಗೆ ನುಗ್ಗಿ 4ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಕಾರ್ಕಳ, ಎ.30: ನಿಟ್ಟೆ ಪಂಚಾಯತ್ ಬಳಿಯ ಮನೆಯೊಂದಕ್ಕೆ ಎ.28 ರಂದು ಲಕ್ಷಾಂತರ ರೂ. ವೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ರಾಘವೇಂದ್ರ ಕುಮಾರ್ ಎ.28ರಂದು ರಾತ್ರಿ 9ಗಂಟೆಗೆ ಮನೆಗೆ ಬೀಗ ಹಾಕಿ ಹೆಂಡತಿ ಮಕ್ಕಳೊಂದಿಗೆ ನಿಟ್ಟೆಯಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದು, ಮರುದಿನ ಸಂಜೆ ವಾಪಾಸು ಮನೆಗೆ ಬಂದು ನೋಡಿದಾಗ ಕಳವಾಗಿರುವುದು ತಿಳಿದು ಬಂತು.
ಮನೆಯ ಎದುರಿನ ಬಾಗಿಲಿನ ಬೀಗದ ಕೊಂಡಿಯನ್ನು ಮುರಿದು ಒಳ ನುಗ್ಗಿದ ಕಳ್ಳರು ಬೆಡ್ರೂಮ್ನ ಕಪಾಟಿನಲ್ಲಿರಿಸಿದ್ದ ಸುಮಾರು 200 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಇವುಗಳ ಒಟ್ಟು ವೌಲ್ಯ 4,00,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Next Story