ಪರಿಶಿಷ್ಟರಿಗೆ ಸಹಾಯಧನ
ಉಡುಪಿ, ಮೇ 26: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2017-18ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅನುದಾನಿತ ಶಾಲೆ ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳಿಗೆ ಕ್ರೀಡಾ/ಫಿಟ್ನೆಸ್ ಸಾಮಗ್ರಿ ಗಳನ್ನು ಖರೀದಿಸಲು ಸಹಾಯಧನ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ.
ಇದರಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅರ್ಹ ಅನುದಾನಿತ ಶಾಲೆ ಹಾಗೂ ಸಂಘ-ಸಂಸ್ಥೆಗಳು ತಮ್ಮ ಪ್ರಸ್ತಾವನೆಗಳನ್ನು ನಿಗದಿತ ಅರ್ಜಿ ನಮೂನೆಯಲ್ಲಿ ತಮ್ಮ ಸಾಧನೆಗಳ ದೃಢೀಕೃತ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇಲ್ಲಿಗೆ ಜೂ.10ರೊಳಗೆ ಸಲ್ಲಿಸಬೇಕು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗೆ ಡಾ.ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ (ದೂರವಾಣಿ:0820-2521324, ಮೊಬೈಲ್: 94808-86467) ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story