ಎನ್ಎಂಪಿಟಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಮಂಗಳೂರು, ಜೂ.8: ಪಣಂಬೂರಿನ ಎನ್ಎಂಪಿಟಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜೂ5ರಂದು ವಿಶ್ವಪರಿಸರ ದಿನವನ್ನು ಆಚರಿಸಲಾಯಿತು.
ವಿದ್ಯಾರ್ಥಿಗಳು ಶಾಲಾ ಕೈತೋಟದಲ್ಲಿ ಸಸಿಗಳನ್ನು ನೆಟ್ಟರು. ಹಾಗೂ ಪರಿಸರದ ಸ್ವಚ್ಛತೆಯನ್ನು ಕಾಪಾಡುವಂತೆ ಮೆರವಣಿಗೆ ಮೂಲಕ ಜನಜಾಗೃತಿ ಮೂಡಿಸಿದರು.
ಈ ಸಂದರ್ಭ ಶಾಲಾಡಳಿತ ಮಂಡಳಿಯ ಅಧ್ಯಕ್ಷ ರಾಜಪ್ಪ, ಉಪಾಧ್ಯಕ್ಷೆ ಭಾಗ್ಯಲಕ್ಷ್ಮೀ, ಕಾರ್ಯದರ್ಶಿ ಯೋಗೀಂದ್ರ, ಶಾಲಾ ಮುಖ್ಯೋಪಾಧ್ಯಾಯಿನಿ ಮೇರಿ ಡಿಸೋಜ, ಅಧ್ಯಾಪಕ ವೃಂದ ಮೊದಲಾದವರು ಉಪಸ್ಥಿತರಿದ್ದರು.
Next Story