ರವಿವಾರ ಈದುಲ್ ಫಿತ್ರ್
ಮಂಗಳೂರು, ಜೂ.24: ಭಟ್ಕಳದಲ್ಲಿ ಶನಿವಾರ ಅಸ್ತಮಿಸಿದ ರವಿವಾರ ರಾತ್ರಿ ಶವ್ವಾಲ್ ತಿಂಗಳ ಪ್ರಥಮ ಚಂದ್ರದರ್ಶನ ಆಗಿರುವುದರಿಂದ ದ.ಕ.ಜಿಲ್ಲೆಯಲ್ಲಿ ರವಿವಾರ ಈದುಲ್ ಫಿತ್ರ್ ಆಚರಿಸುವಂತೆ ದ.ಕ.ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಘೋಷಿಸಿದ್ದಾರೆ ಎಂದು ಮಸ್ಜಿದ್ ಝೀನತ್ ಬಕ್ಷ್ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ.ರಶೀದ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಶನಿವಾರ ಅಸ್ತಮಿಸಿದ ರವಿವಾರ ರಾತ್ರಿ ಶವ್ವಾಲ್ ತಿಂಗಳ ಪ್ರಥಮ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಜೂ.25ರಂದು ಉಡುಪಿ ಜಿಲ್ಲೆಯಾದ್ಯಂತ ಈದುಲ್ ಫಿತ್ರನ್ನು ಆಚರಿಸಲಾಗುವುದು ಎಂದು ಉಡುಪಿ ಜಿಲ್ಲಾ ಸುನ್ನಿ ಸಂಯುಕ್ತ ಜಮಾಅತಿನ ಖಾಝಿ ಅಲ್ಹಾಜ್ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಉಸ್ತಾದ್ ತಿಳಿಸಿದ್ದಾರೆ.
Next Story