ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ಶಿಬಿರ
ಪಡುಬಿದ್ರಿ, ಜು.1: ಸಿಎಸ್ಐ ವಿಶ್ವ ವೈದ್ಯರ ದಿನಾಚರಣೆ ಪ್ರಯುಕ್ತ ಪಡುಬಿದ್ರಿಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಶನಿವಾರ ನಡೆಯಿತು.
ಉಡುಪಿಯ ಸಿಎಸ್ಐ ಲೋಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆ, ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯ ಹಾಗೂ ವೈದ್ಯಕೀಯ ಪ್ರತಿನಿಧಿಗಳ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
Next Story