ಜು.4ರಂದು ಹಜ್ ಯಾತ್ರಾರ್ಥಿಗಳಿಗೆ ಚುಚ್ಚುಮದ್ದು
ಮಂಗಳೂರು, ಜು.2: ಪ್ರಸಕ್ತ ವರ್ಷ ಪವಿತ್ರ ಹಜ್ಯಾತ್ರೆ ಕೈಗೊಳ್ಳುವ ಯತ್ರಾರ್ಥಿಗಳಿಗೆ ಚುಚ್ಚುಮದ್ದು ಲಸಿಕೆ ಹಾಕುವ ಕಾರ್ಯಕ್ರಮ ಜು.4ರಂದು ಮಂಗಳೂರಿನ ಕೊಡಿಯಾಲಬೈಲಿನಲ್ಲಿರುವ ಯೆನೆಪೊಯ ಆಸ್ಪತ್ರೆಯಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ 9:30ರಿಂದ ಸಂಜೆ 4ರವರೆಗೆ ನಡೆಯುವ ಈ ಲಸಿಕೆ ಕಾರ್ಯಕ್ರಮದ ಪ್ರಯೋಜನವನ್ನು ಹಜ್ ಯಾತ್ರಾರ್ಥಿಗಳು ಪಡೆದುಕೊಳ್ಳುವಂತೆ ಮಂಗಳೂರು ಹಜ್ ನಿರ್ವಹಣಾ ಸಮಿತಿಯ ಅಧ್ಯಕ್ಷ ಯೆನೆಪೊಯ ಮುಹಮ್ಮದ್ ಕುಂಞಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story