ಮಂಗಳೂರಿನಲ್ಲಿ ಇಂದ್ರಧನುಷ್ ಅಭಿಯಾನಕ್ಕೆ ಚಾಲನೆ
ಮಂಗಳೂರು, ಜ.4: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗರ್ಭಿಣಿ ಹಾಗೂ 2 ವರ್ಷದೊಳಗಿನ ಮಕ್ಕಳಿಗೆ ನೀಡುವ ನಾಲ್ಕನೆ ಸುತ್ತಿನ ಇಂದ್ರಧನುಷ್ ಲಸಿಕೆ ಕಾರ್ಯಕ್ರಮಕ್ಕೆ ಇಂದು ಲೇಡಿಗೋಶನ್ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು. ಶಾಸಕ ಜೆ.ಆರ್.ಲೋಬೊ ಮಕ್ಕಳಿಗೆ ಲಸಿಕಾ ಹನಿ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಜಿಪಂ ಸಿಇಒ ಪಿ.ಐ.ಶ್ರೀವಿದ್ಯಾ, ಡಾ.ಸಿಕಂದರ್ ಪಾಷಾ ಮೊದಲಾದವರು ಉಪಸ್ಥಿತರಿದ್ದರು.
Next Story