ನೇಣು ಬಿಗಿದು ಕೂಲಿ ಕಾರ್ಮಿಕ ಆತ್ಮಹತ್ಯೆ
ಪಡುಬಿದ್ರೆ, ಜು.11 ಕೂಲಿ ಕಾರ್ಮಿಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಜಮಾಡಿಯ ಗುಂಡಿ ಎಂಬಲ್ಲಿ ಮಂಗಳವಾರ ನಡೆದಿದೆ.
ಹೆಜಮಾಡಿಯ ಗುಂಡಿ ನಿವಾಸಿ ಕರಿಯ ಎಂಬವರ ಪುತ್ರ ಗಣೇಶ್(19) ಆತ್ಮಹತ್ಯೆ ಮಾಡಿಕೊಂಡ ಯುವಕ. ತನ್ನ ಮನೆ ಸಮೀಪದ ಮರಕ್ಕೆ ಮಂಗಳವಾರ ಮುಂಜಾನೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story