ಮಂಗಳೂರು: ಕಟ್ಟಡ ಕಾರ್ಮಿಕರಿಂದ ಜಿಲ್ಲಾ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಗೆ ಮುತ್ತಿಗೆ
ಮಂಗಳೂರು, ಆ.7: ದ.ಕ. ಜಿಲ್ಲೆಯ ಕಾರ್ಮಿಕ ಇಲಾಖೆಯ ಅವ್ಯವಸ್ಥೆಯ ವಿರುದ್ಧ ಸಿಡಿದೆದ್ದಿರುವ ಕಟ್ಟಡ ನಿರ್ಮಾಣ ಕಾರ್ಮಿಕರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಶನ್ ನೇತೃತ್ವದಲ್ಲಿಂದು ಜಿಲ್ಲಾ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಾರ್ಮಿಕರಿಗೆ ವೈದ್ಯಕೀಯ, ಮದುವೆ ಧನಸಹಾಯಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸುವಲ್ಲಿ ಜಿಲ್ಲಾಧಿಕಾರಿಯ ಆದೇಶವನ್ನು ಧಿಕ್ಕರಿಸಿದೆ ಎಂದು ಆರೋಪಿಸಿದರು.
ಪ್ರತಿಭಟನೆಗೆ ಮೊದಲು ನಗರದ ಅಂಬೇಡ್ಕರ್ ವೃತ್ತದಿಂದ ಕಾರ್ಮಿಕರು ಮೆರವಣಿಗೆ ನಡೆಸಿದರು.
Next Story