ಫರಂಗಿಪೇಟೆ: ಆ.21ರಂದು 'ಗುಂಪು ಹಿಂಸಾ ಹತ್ಯೆಯನ್ನು ಪ್ರತಿರೋಧಿಸೋಣ' ಸಾರ್ವಜನಿಕ ಕಾರ್ಯಕ್ರಮ
ಫರಂಗಿಪೇಟೆ, ಆ.20: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಮ್ಮಿಕೊಂಡಿರುವ 'ಭಾರತದ ಗುಂಪು ಹಿಂಸಾ ಹತ್ಯೆಯನ್ನು ಪ್ರತಿರೋಧಿಸೋಣ' ಎಂಬ ರಾಷ್ಟ್ರೀಯ ಅಬಿಯಾನದ ಪ್ರಯುಕ್ತ ಎಸ್.ಡಿ.ಪಿ.ಐ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಆ.21ರಂದು ಸಂಜೆ 4:30ಕ್ಕೆ ಫರಂಗಿಪೇಟೆಯಲ್ಲಿ ಸಾರ್ವಜನಿಕ ಸಮಾವೇಶ ನಡೆಯಲಿದೆ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಮುಖ್ಯ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಎಸ್.ಡಿ.ಪಿ.ಐ. ರಾಜ್ಯ ಕಾರ್ಯದರ್ಶಿ ಅಕ್ರಮ್ ಹಸನ್, ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೊಡಾಜೆ ಭಾಗವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಾಹುಲ್ ಎಸ್.ಎಚ್. ವಹಿಸಲಿದ್ದಾರೆ ಎಂದು ಎಸ್.ಡಿ.ಪಿ.ಐ. ಬಂಟ್ವಾಳ ಕ್ಷೇತ್ರದ ಕಾರ್ಯದರ್ಶಿ ಇಸ್ಮಾಯಿಲ್ ಬಾವ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story