ಶರತ್ ಹತ್ಯೆ ಪ್ರಕರಣ: ಮತ್ತೆ ಇಬ್ಬರ ಬಂಧನ
ಮಂಗಳೂರು, ಆ. 22: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದಲ್ಲಿ ಮತ್ತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 10ಕ್ಕೇರಿದೆ. ಬಂಟ್ವಾಳ ತಾಲೂಕಿನ ಆಲಾಡಿ ನಿವಾಸಿ ಶರೀಫ್ (20) ಮತ್ತು ಪುತ್ತೂರಿನ ರಾಮಕುಂಜ ನಿವಾಸಿ ಜಬ್ಬಾರ್ (29) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಶರೀಫ್ ಪ್ರಕರಣದ ಪ್ರಮುಖ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಜಬ್ಬಾರ್ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಶರೀಫ್ನನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
Next Story