ಉಡುಪಿ : ಕುಂದುಕೊರತೆ ಸಭೆ
ಉಡುಪಿ, ಸೆ.21: ಉಡುಪಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆ ಸೆ.28ರಂದು ಬೆಳಗ್ಗೆ 10:30ಕ್ಕೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಮುಖಂಡರು ಮತ್ತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿರುವಂತೆ ಸಮಾಜ ಕಲ್ಯಾಣ ಇಲಾಖೆಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
Next Story