ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಮುಹಮ್ಮದ್
ಹೆಬ್ರಿ, ಅ.1: ನಿರಂತರ ಸುಳ್ಳು ಅಪ್ರಚಾರ ಮಾಡುತ್ತಿರುವ ಬಿಜೆಪಿಯು ಕಾಂಗ್ರೆಸ್ ಮುಕ್ತ ಕರ್ನಾಟಕ ಎಂದು ಹೇಳುತ್ತಿದ್ದರೆ, ಕಾಂಗ್ರೆಸ್ ಸರಕಾರ ನುಡಿದಂತೆ ನಡೆದು ಜನರ ಎಲ್ಲ ಬೇಕುಬೇಡಗಳನ್ನು ಈಡೇರಿಸಿ ಹಸಿವು ಮುಕ್ತ ಕರ್ನಾಟಕ ಮಾಡುತ್ತಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವುದು ಶತ:ಸಿದ್ಧ. ಬಿಜೆಪಿಯ ಯಾವ ತಂತ್ರವೂ ಫಲಿಸುವುದಿಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ಹಾಗೂ ಕಾರ್ಕಳದ ಕ್ಷೇತ್ರದ ಉಸ್ತುವಾರಿ ಎಂ.ಎಸ್.ಮಹಮ್ಮದ್ ಹೇಳಿದ್ದಾರೆ.
ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಹೆಬ್ರಿಯ ಚೈತನ್ಯ ಯುವ ವೃಂದದ ಸಭಾಂಗಣದಲ್ಲಿ ಆಯೋಜಿಸಲಾದ ಕಾಂಗ್ರೆಸ್ ಕಾರ್ಯಕರ್ತರ ಸಮಾ ವೇಶದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಗೋಪಾಲ ಭಂಡಾರಿ ಮಾತನಾಡಿ, ಅ.10ರಂದು ಕಾರ್ಕಳದಲ್ಲಿ ನಡೆಯುವ ಕ್ಷೇತ್ರ ಮಟ್ಟದ ಕಾಂಗ್ರೆಸ್ ಸಮಾ ವೇಶವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಜಿಪಂ ಮಾಜಿ ಸದಸ್ಯ ಮಂಜುನಾಥ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಕೆಪಿಸಿಸಿ ಕಾರ್ಯದರ್ಶಿ ಹಾಗೂ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಜಿ.ಎ. ಬಾವಾ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಚ್.ಶೇಖರ ಮಡಿವಾಳ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕಾರ್ಯದರ್ಶಿ ರಾಘವ ದೇವಾಡಿಗ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನವೀನ ಅಡ್ಯಂತಾಯ, ಜಿಪಂ ಮಾಜಿ ಉಪಾಧ್ಯಕ್ಷ ಡಾ.ಸಂತೋಷ ಕುಮಾರ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತ ಲಕ್ಷ್ಮಣ್ ಮೊದಲಾದವರು ಉಪಸ್ಥಿತರಿದ್ದರು.