ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಶಂಕರನಾರಾಯಣ, ಅ.10: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ರವಿಕಿರಣ(28) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.9ರಂದು ರಾತ್ರಿ ವೇಳೆ ಸಿದ್ಧಾಪುರ ಗ್ರಾಮದ ಕೊಡ್ಗಿಯ ಗೇರುಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ: ಕೊಳದ ಅನಿಯಲ್ತೋಟದ ನಿವಾಸಿ ಕೃಷ್ಣ ಮೆಂಡನ್(42) ಎಂಬವರ ಮಗ ದೀಕ್ಷಿತ್(23) ಎಂಬವರು ವೈಯಕ್ತಿಕ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಅ.10ರಂದು ಬೆಳಗ್ಗೆ ಮನೆಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story