ಮಾರುತಿ ಓಮ್ನಿ ಢಿಕ್ಕಿ: ಬೈಕ್ ಸವಾರ ಮೃತ್ಯು
ಸಾಗರ, ಡಿ.5: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 206ರ ಪ್ರಗತಿಶಾಲೆ ಎದುರು ಬೈಕ್ ಮತ್ತು ಓಮ್ನಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ನಡೆದಿದೆ ಎನ್ನಲಾಗಿದೆ. ಗಾಳಿಪುರ ನಿವಾಸಿ ರವಿ (34) ಮೃತಪಟ್ಟ ಬೈಕ್ ಸವಾರ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ರವಿ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ.
ಬೈಕ್ನ ಹಿಂಬದಿ ಸವಾರ ಹುಣಸೂರು ನಿವಾಸಿ ಗಣಪತಿ ಎಂಬವರಿಗೆ ಸಣ್ಣಪುಟ್ಟ ಗಾಯವಾಗಿದೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story