ರೈಲಿಗೆ ಸಿಲುಕಿ ವ್ಯಕ್ತಿ ಸಾವು
ಶಿವಮೊಗ್ಗ,ಡಿ.13: ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ನಗರದ ಹೊರವಲಯ ಪಿಅಂಡ್ಟಿ ಕಾಲೋನಿ ಸಮೀಪ ವರದಿಯಾಗಿದೆ.
ಮೃತ ವ್ಯಕ್ತಿಯ ಹೆಸರು,ವಿಳಾಸ ಸೇರಿದಂತೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮೃತರು 5.5 ಅಡಿ ಎತ್ತರವಿದ್ದು, ಸುಮಾರು 40 ರಿಂದ 45 ರ ವರ್ಷವಿದೆ. ಸಾಧಾರಣ ಮೈಕಟ್ಟು, ಗೋಧಿ ಮೈ ಬಣ್ಣ ಹೊಂದಿದ್ದಾರೆ. ಈ ಸಂಬಂದ ಶಿವಮೊಗ್ಗದ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Next Story