ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ : ನಾಲ್ವರ ಬಂಧನ
ಶಿವಮೊಗ್ಗ, ಜ.1: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದ ಮೇರೆಗೆ ಜಿಲ್ಲಾ ಅಪರಾಧ ಪತ್ತೆ ದಳ ಪೊಲೀಸರು ನಾಲ್ವರನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಅರವಿಂದ, ರಂಗಸ್ವಾಮಿ, ಪುರಲೆಯ ಕುಮಾರ್ ಮತ್ತು ಮಂಜು ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಎಂಆರ್ಎಸ್ ವೃತ್ತದ ಬಳಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಸುಮಾರು 2.5 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಡಿಸಿಬಿ ಇನ್ಸ್ಪೆಕ್ಟರ್ ಕುಮಾರ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದ್ದಾರೆ.
Next Story