ಶಿವಮೊಗ್ಗ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಶಿವಮೊಗ್ಗ, ಜ. 20: ಹೊಟ್ಟೆ ನೋವಿನಿಂದ ಬೇಸತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಹರಳಿಕೊಪ್ಪ ಗ್ರಾಮದಲ್ಲಿ ವರದಿಯಾಗಿದೆ.
ಮಣಿಕಂಠ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷದಿಂದ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದುಕೊಂಡರೂ ಗುಣಮುಖವಾಗಿರಲಿಲ್ಲ. ಇದರಿಂದ ಜಿಗುಪ್ಸೆಗೊಂಡು ವಿಷ ಸೇವಿಸಿದ್ದು, ತಕ್ಷಣವೇ ಕುಟುಂಬದವರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.
ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story