ಮಡಿಕೇರಿ: ಲಾರಿ ಪಲ್ಟಿ; ತಪ್ಪಿದ ಅನಾಹುತ
ಮಡಿಕೇರಿ, ಫೆ.8: ಬೆಂಗಳೂರಿನಿಂದ ಮಂಗಳೂರು ಬಂದರಿಗೆ ಸರಕು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗುರುಳಿದ ಘಟನೆ ಮಡಿಕೇರಿ ಸಮೀಪದ ತಾಳತ್ತಮನೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಘಟನೆಯಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story