ಮೈಸೂರು: ಮದುವೆಗೆ ನಿರಾಕರಿಸಿದ ಪ್ರೇಯಸಿ; ಯುವಕ ಆತ್ಮಹತ್ಯೆ
ಮೈಸೂರು,ಎ.5: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲವಾಲದಲ್ಲಿ ನಡೆದಿದೆ.
ಮೃತನನ್ನು ಇಲವಾಲದ ಜನತಾ ಕಾಲೋನಿ ನಿವಾಸಿ ಮಂಜು(23)ಎಂದು ಗುರುತಿಸಲಾಗಿದ್ದು, ಈತ ಮೈಸೂರು ತಾಲೂಕು ಇಲವಾಲ ಗ್ರಾಮದ ದೊಡ್ಡಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈತ ಸೆಂಟರಿಂಗ್ ಕೆಲಸ ಮಾಡುತ್ತಿದ್ದು, ಪ್ರೀತಿಸಿದ ಹುಡುಗಿ ಮದುವೆಗೆ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಪ್ಪಲಿ ಹಾಗೂ ಮೊಬೈಲ್ ನ್ನು ದಂಡೆಯ ಮೇಲೆ ಇಟ್ಟು ಕೆರೆಗೆ ಹಾರಿದ್ದ. ಇದನ್ನು ಗಮನಿಸಿದ ಸ್ಥಳೀಯರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಇಲವಾಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story