ಬಳ್ಳಾರಿ: ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ
ಬಳ್ಳಾರಿ, ಎ.13: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ವೈದ್ಯರೊಬ್ಬರ ಸಹಿತ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಸೋಮಸಮುದ್ರ ಬಳಿ ಶುಕ್ರವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಮೃತರನ್ನು ಬೀದರಿನ ಭಾಲ್ಕಿ ಮೂಲದ ವೈದ್ಯ ಡಾ.ಸಂತೋಷ್(35), ಅವರ ಪತ್ನಿ ಅರ್ಚನಾ(28), ಪುತ್ರಿ ಲಕ್ಷ್ಮೀ(5) ಹಾಗೂ ಸಂಬಂಧಿಕ ಸಿದ್ರಾಮಪ್ಪ(45) ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರು ಸಂಚರಿಸುತ್ತಿದ್ದ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿಯಾಗಿ ಈ ದುರಂತ ಸಂಭವಿಸಿದೆ.
ಈ ಬಗ್ಗೆ ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story