ಶಿವಮೊಗ್ಗ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಮೃತ್ಯು
ಮೂವರಿಗೆ ಗಂಭೀರ ಗಾಯ
ಸಾಂದರ್ಭಿಕ ಚಿತ್ರ
ಶಿವಮೊಗ್ಗ, ಎ. 17: ಗ್ಯಾಸ್ ಸೋರಿಕೆಯಾಗುತ್ತಿದ್ದ ಕಾರಣದಿಂದ ಮನೆಯ ಹೊರಭಾಗದಲ್ಲಿ ತಂದಿಡಲಾಗಿದ್ದ ಸಿಲಿಂಡರ್ ಸ್ಫೋಟಗೊಂಡು ಮಹಿಳೆಯೋರ್ವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಭದ್ರಾವತಿ ಪಟ್ಟಣದ ಕೂಲಿಬ್ಲಾಕ್ ಶೆಡ್ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.
ಸರಸ್ವತಿ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಾ ಎಂಬುವರ ಮನೆಯ ಸಿಲಿಂಡರ್ ನಲ್ಲಿ ಗ್ಯಾಸ್ ಸೋರಿಕೆಯಾಗುತ್ತಿತ್ತು. ತಕ್ಷಣವೇ ಅವರ ಮನೆಯವರು ಸಿಲಿಂಡರ್ ನ್ನು ಮನೆಯ ಹೊರಭಾಗದಲ್ಲಿ ತಂದಿರಿಸಿದ್ದರು. ಈ ವೇಳೆ ಆಕಸ್ಮಿಕವಾಗಿ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡು ಸ್ಫೋಟಿಸಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
Next Story