ಅಂಬರೀಶ್ ರನ್ನು ಭೇಟಿಯಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಎ.21: ಮಾಜಿ ಸಚಿವ ಅಂಬರೀಶ್ ಅವರನ್ನು ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಂಬರೀಶ್ ಅವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಮತ್ತು ಬಿ ಫಾರಂ ನೀಡಲಾಗಿದೆ. ಸ್ಪರ್ಧಿಸುವುದು ಅಥವಾ ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದರು.
ಅಂಬರೀಶ್ ಮೌನ ವಹಿಸಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗೊಂದಲದಲ್ಲಿದ್ದಾರೆ ಎಂದರು.
Next Story