ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಮೈಸೂರು, ಮೇ 1: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಮೈಸೂರಿಗೆ ಆಗಮಿಸಿದರು.
ಮೈಸೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ಮೋದಿ ಬಳಿಕ ಅಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ಸಂತೇಮರಹಳ್ಳಿಗೆ ತೆರಳಿದರು.
ಚಾಮರಾಜನಗರದ ಸಂತೇಮರಹಳ್ಳಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ರ್ಯಾಲಿಗೆ ಆಗಮಿಸಿದ ಪ್ರಧಾನ ಮಂತ್ರಿ ಮೋದಿ ಅವರನ್ನು ಪಕ್ಷದ ಅಭ್ಯರ್ಥಿಗಳು ಸ್ವಾಗತಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಉಪಸ್ಥಿತರಿದ್ದರು.
Next Story