ಕಂಟೈನರ್- ಕಾರು ಢಿಕ್ಕಿ: ಮೂವರು ಸ್ಥಳದಲ್ಲೇ ಮೃತ್ಯು
ಇಬ್ಬರಿಗೆ ಗಂಭೀರ ಗಾಯ
ಬೀದರ್/ಬೆಂಗಳೂರು, ಮೇ 13: ಶರವೇಗದಲ್ಲಿ ಸಾಗುತ್ತಿದ್ದ ಕಂಟೈನರ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ರಾಜೇಂದ್ರ (52), ಶ್ರೀಧರ್ (32), ಸಂತೋಷ್(40) ಮೂವರು ಸ್ಥಳದಲ್ಲೇ ಅಸುನೀಗಿದ್ದು, ಗಾಯಗೊಂಡ ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ರವಿವಾರ ಬೆಳಗ್ಗೆ ಬಸವಕಲ್ಯಾಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುತ್ತಿದ್ದ ಕಾರನ್ನು ಕಂಟೈನರ್ ಓವರ್ ಟೇಕ್ ಮಾಡುವ ಭರದಲ್ಲಿ ಢಿಕ್ಕಿ ಹೊಡೆದಿದ್ದು, ತೀವ್ರವಾಗಿ ಗಾಯಗೊಂಡು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದರಿಂದ ಕೆಲಕಾಲ ಸಂಚಾರ ದಟ್ಟಣೆಯೂ ಉಂಟಾಗಿತ್ತು.
Next Story