ಮೈಸೂರು: ಅತ್ಯಾಚಾರ ಆರೋಪಿ ನೇಣು ಬಿಗಿದು ಆತ್ಮಹತ್ಯೆ
ಮೈಸೂರು,ಮೇ.24: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಮೈಸೂರಿನ ನಾಯ್ಡುನಗರದ ವಿಜಯೇಂದ್ರ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮನೆಯ ಸಮೀಪವಿರುವ ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಎನ್ನಲಾಗಿದ್ದು, ಆತನ ವಿರುದ್ಧ ಅಪ್ರಾಪ್ತೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಳು.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ವಿಜಯೇಂದ್ರನನ್ನು ಪೊಲೀಸರು ವಿಚಾರಣೆಗೆ ಬರುವಂತೆ ಹೇಳಿದ್ದರು. ಇದರಿಂದ ಮನನೊಂದ ವಿಜಯೇಂದ್ರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಎನ್.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story