ಹೊಸಪೇಟೆ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
ಹೊಸಪೇಟೆ, ಜೂ. 10: ‘ನೀಟ್’ ಪರೀಕ್ಷೆಯಲ್ಲಿ ಕಡಿಮೆ ಅಂಕ ತೆಗೆದುಕೊಂಡ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಪಟ್ಟಣದ ಟಿ.ಬಿ.ಡ್ಯಾಂ ಬಳಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು ಕೋಮಲವಲ್ಲಿ(18) ಎಂದು ಗುರುತಿಸಲಾಗಿದೆ. ಕೋಮಲವಲ್ಲಿ ಹೊಸಪೇಟೆಯ ಟಿ.ಬಿ.ಡ್ಯಾಂ ನಿವಾಸಿಯಾಗಿದ್ದು, ಜಿಲ್ಲೆಯ ಸಂಡೂರಿನ ಕೇಂದ್ರಿಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ಹೇಳಲಾಗಿದೆ.
ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಟಿ.ಬಿ.ಡ್ಯಾಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.
Next Story