ಕಾಂಗ್ರೆಸ್ಸಿಗರೇ ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತಿದ್ದಾರೆ: ಈಶ್ವರಪ್ಪ ವ್ಯಂಗ್ಯ
ಮೈಸೂರು,ಜೂ.10: ನಾವು ಕಾಂಗ್ರೆಸ್ ಮುಕ್ತ ಭಾರತ ಮಾಡಲು ಹೊರಟಿದ್ದೇವೆ. ಈಗ ಕಾಂಗ್ರೆಸ್ಸಿಗರೇ ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತಿದ್ದಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.
ಹುಟ್ಟುಹಬ್ಬದ ಹಿನ್ನಲೆಯಲ್ಲಿ ರವಿವಾರ ಚಾಮುಂಡಿ ಬೆಟ್ಟಕ್ಕೆ ಬಂದು ನಾಡದೇವತೆ ಶ್ರೀಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ನಾವು ಕಾಂಗ್ರೆಸ್ ಮುಕ್ತ ಭಾರತ ಮಾಡಲು ಹೊರಟಿದ್ದೇವೆ. ಈಗ ಕಾಂಗ್ರೆಸಿಗರೇ ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತಿದ್ದಾರೆ. ರಾಜಕೀಯ ಇತಿಹಾಸದಲ್ಲಿ ಕಾಂಗ್ರೆಸ್ ಶಾಸಕ, ಕಾಂಗ್ರೆಸ್ ಅಧ್ಯಕ್ಷರನ್ನೇ ಮಾರಾಟ ಮಾಡುತ್ತಿದ್ದಾರೆ. ಯಡಿಯೂರಪ್ಪನವರ ಶಕ್ತಿಯಿಂದ ರಾಜ್ಯದಲ್ಲಿ ಬಿಜೆಪಿ ಬಹುಮತ ಸಾಧಿಸಿತ್ತು ಎಂದರು.
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವವರು ಕಾಂಗ್ರೆಸ್ ನ ಅತೃಪ್ತರು. ಮೈತ್ರಿ ಸರ್ಕಾರದ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಈಗ ಯಾರು ಅಂತ ನಾನು ಹೇಳಲಾರೆ. ನೀವೇ ಮುಂದಿನ ದಿನಗಳಲ್ಲಿ ಕಾದು ನೋಡಿ ಎಂದರು.
Next Story