ಐದು ವರ್ಷವೂ ಕುಮಾರಸ್ವಾಮಿಯೇ ಸಿಎಂ ಆಗಿರಲಿ: ವಿಪಕ್ಷ ನಾಯಕ ಯಡಿಯೂರಪ್ಪ
ಬೆಂಗಳೂರು, ಜೂ. 16: ‘ಒಂದು ವರ್ಷ ಅಷ್ಟೇ ಏಕೆ, ಐದು ವರ್ಷವೂ ಎಚ್.ಡಿ.ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿರಲಿ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರಕಾರ ಅವರದ್ದೇ ಇದೆ. ಒಂದು ವರ್ಷ ಏಕೆ, 5 ವರ್ಷವೂ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ. ವಿಪಕ್ಷದಲ್ಲಿದ್ದು ನಮ್ಮ ಕೆಲಸವನ್ನು ನಾವು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ತಿರುಗೇಟು ನೀಡಿದರು.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಯಾವುದೇ ಸಂಘಟನೆ ಭಾಗಿಯಾಗಿದ್ದರೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಇದಕ್ಕೆ ನಮ್ಮದೇನೂ ಅಭ್ಯಂತರವಿಲ್ಲ ಎಂದು ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದರು.
Next Story