ಚಿಕ್ಕಮಗಳೂರು: ಬಟ್ಟೆ ಅಂಗಡಿಗೆ ಬೆಂಕಿ; ಲಕ್ಷಾಂತರ ರೂ. ನಷ್ಟ
ಚಿಕ್ಕಮಗಳೂರು, ಜು.12: ನಗರದ ಎಂ.ಜಿ.ರಸ್ತೆಯಲ್ಲಿರುವ ಕಾಟನ್ ಎಕ್ಸ್ಪೋ ಸೇಲ್ ಬಟ್ಟೆ ಅಂಗಡಿಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಬಟ್ಟೆ, ಚಪ್ಪಲಿ ಸೇರಿದಂತೆ ಫ್ಯಾನ್ಸಿ ವಸ್ತುಗಳು ಬೆಂಕಿಗೆ ಆಹುತಿಯಾಗಿ, ನಾಲ್ವರು ಕೆಲಸಗಾರರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದು ತಿಳಿದುಬಂದಿದ್ದು, ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿದ್ದ ಬೆಲೆಬಾಳುವ ಸೀರೆ, ಚಪ್ಪಲಿ, ಸೇರಿದಂತೆ ಅನೇಕ ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಂಗಡಿ ಕೆಲಸ ಮುಗಿಸಿ ಅಂಗಡಿಯಲ್ಲೇ ಮಲಗಿದ್ದ ಆರು ಜನ ಕೆಲಸಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story