ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ದಾಳಿ; ಮೂವರ ಬಂಧನ
ಮೈಸೂರು,ಆ.4: ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಸಿ.ಸಿ.ಬಿ. ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ನಗರದ ಫೋರ್ಟ್ ಮೊಹಲ್ಲಾದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತಿದ್ದ ಭಾಗ್ಯಮ್ಮ(40), ಗೀತಾ(30), ಮತ್ತು ಪ್ರಶಾಂತ್(41) ಎಂಬುವವರನ್ನು ಬಂಧಿಸಲಾಗಿದ್ದು, 2,520 ರೂ. ನಗದು, ಮೂರು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿ, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
Next Story