ಮೈಸೂರು: ಸೆ.8, 9 ರಂದು ರಾಜ್ಯಮಟ್ಟದ ಮೌಂಟೇನ್ ಸೈಕ್ಲಿಂಗ್ ಚಾಂಪಿಯನ್ ಶಿಪ್
ಮೈಸೂರು,ಆ.29: ಕರ್ನಾಟಕ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಂಗ ಸಂಸ್ಥೆಯಾದ ಮೈಸೂರು ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಷನ್ ವತಿಯಿಂದ 14ನೇ ರಾಜ್ಯ ಮಟ್ಟದ ಮೌಂಟೆನ್ ಸೈಕ್ಲಿಂಗ್ ಚಾಂಪಿಯನ್ ಶಿಫ್ ಅನ್ನು ಸೆ.8 ಮತ್ತು 9ರಂದು ಲಲಿತ್ ಮಹಲ್ ಹೆಲಿಪ್ಯಾಡ್ ಮೈದಾನದಲ್ಲಿ ಆಯೋಜಿಸಲಾಗಿದೆ.
14 ವರ್ಷದೊಳಗೆ, 16, 18 ಒಳಗೆ ಹಾಗೂ 18 ವರ್ಷ ಮೇಲ್ಪಟ್ಟ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಸಲಾಗುವುದು. ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 250 ಸೈಕ್ಲಿಸ್ಟ್ ಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ಪ್ರತಿ ಸೈಕ್ಲಿಸ್ಟ್ ಗಳಿಗೆ ಎರಡು ವಿವಿಧ ಸ್ಪರ್ಧೆಗಳು ಜರುಗಲಿದ್ದು, ಆಸಕ್ತರು ಸೆ.7ರೊಳಗೆ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಕಾರ್ಯಕಾರಿ ಸಮಿತಿ ಸದಸ್ಯ ನಾಗರಾಜ್ ವೇಣುಗೋಪಾಲ್ ತಿಳಿಸಿದರು.
ಅದರಂತೆ ಸೆ.2ರಂದು ಜಿಲ್ಲಾ ಮಟ್ಟದ ಆಯ್ಕೆ ಸೈಕ್ಲಿಂಗ್ ಪಂದ್ಯಾವಳಿ ನಡೆಯಲಿದ್ದು, ಇಲ್ಲಿ ವಿಜೇತರನ್ನು ರಾಜ್ಯಮಟ್ಟದ ಪಂದ್ಯಾವಳಿಗೆ ಅವಕಾಶ ನೀಡಲಾಗುವುದು, ಸೆ.1ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ನೋಂದಣಿ ಮಾಡಿಕೊಳ್ಳಲಾಗುವುದು. ವಿವರಗಳಿಗೆ ಮೊ.ಸಂ. 9880244649, 9379211117 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಉಪಾಧ್ಯಕ್ಷ ಮನು ಗೌಡ, ಜಂಟಿ ಕಾರ್ಯದರ್ಶಿ ಸತೀಶ್ ಬಾಬು, ಎನ್.ಲೋಕೇಶ್ ಗೋಷ್ಠಿಯಲ್ಲಿ ಹಾಜರಿದ್ದರು.