ಮಡಿಕೇರಿ: ಜೀಪ್ ಢಿಕ್ಕಿಯಾಗಿ ಪಾದಾಚಾರಿ ಸಾವು
ಮಡಿಕೇರಿ, ಸೆ.6 : ಚಾಲಕನ ನಿಯಂತ್ರಣ ಕಳೆದುಕೊಂಡು ಜೀಪೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.
ನಗರದ ದೇಚೂರು ರಸ್ತೆಯ ಇಳಿಜಾರಿನಲ್ಲಿ ವೇಗವಾಗಿ ಬಂದ ಜೀಪು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ತೆರಳುತ್ತಿದ್ದ ಪಶ್ಚಿಮ ಬಂಗಾಳ ಮೂಲಕ ತೌಫಲ್ (45) ಎಂಬವರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ತೌಫಲ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಜೀಪು ಮಗುಚಿಕೊಂಡಿದೆ.
ಜೀಪು ಚಾಲಕನ ವಿರುದ್ಧ ಅಜಾಗರೂಕತೆಯ ಚಾಲನೆ ಪ್ರಕರಣ ದಾಖಲಿಸಿಕೊಂಡಿರುವ ನಗರ ಸಂಚಾರಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story